ಉತ್ತರ ಕನ್ನಡ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಶಿರೂರು ಬಳಿಯಲ್ಲಿ ಗುಡ್ಡ ಕುಸಿತಗೊಂಡಿತ್ತು. ಎರಡು ಕುಟುಂಬಗಳು ಸಹಿತ ವಾಹನ ಸವಾರರು ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೂ 6 ಜನರ ಮೃತದೇಹಗಳು ಪತ್ತೆಯಾಗಿದ್ದವು. ಇಂದು ಛಿದ್ರ ಛಿದ್ರವಾಗಿರುವಂತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ.
ಇಂದು ಬೆಳಂಬಾರ ಕಡಲತೀರದಲ್ಲಿ ಛಿದ್ರ ಛಿದ್ರವಾಗಿರುವಂತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಗುರುತಿಸಲಾಗದಂತ ಸ್ಥಿತಿಯಲ್ಲಿ ಮೃತದೇಹವಿದೆ. ಮೃತದೇಹದ ಕಾಲುಗಳಷ್ಟೇ ಪತ್ತೆಯಾಗಿದ್ದು, ಅದನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ. ಇನ್ನುಳಿದವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಸ್ಥಳದಲ್ಲಿ ಜೆಸಿಪಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ಮುಂದುವರೆದಿದೆ.