ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ-ಅಂಕೋಲ ಬಿಜೆಪಿ ಶಾಸಕ ಸತೀಶ್ ಸೈಲ್ ಈವರೆಗೂ ಈ ಒಂದು ದುರಂತದಲ್ಲಿ 15 ಜನರು ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಘಟನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿದು 15 ಜನರು ಮೃತ ಪಟ್ಟಿದ್ದಾರೆ ಎಂದು ಮತ್ತೆ ಸ್ಪಷ್ಟಪಡಿಸಿದ್ದೇನೆ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಹೇಳಿಕೆ ನೀಡಿದ್ದಾರೆ. ದುರಂತದಲ್ಲಿ 15 ಜನರು ಮೃತಪಟ್ಟಿರುವ ಬಗ್ಗೆ ಪಕ್ಕಾ ಮಾಹಿತಿ ಇದೆ ಎಂದರು.
ಘಟನೆಗೆ ಸಂಬಂಧಿಸಿದಂತೆ ಸಾವಿನ ಪ್ರಮಾಣ 15 ಕ್ಕೂ ಹೆಚ್ಚು ಆಗಬಹುದು. ಆದರೆ ಕಡಿಮೆ ಅಂತೂ ಆಗಲ್ಲ. ಸಿಎಂ, ಡಿಸಿಎಂ ಹಾಗೂ ಸಚಿವರು ಸ್ಥಳಕ್ಕೆ ಬರಬೇಕೆಂದು ಆಗ್ರಹ ಮಾಡುತ್ತೇನೆ. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಲು ಹೋದಾಗ ನೋವು ಆಗುತ್ತೆ ಎಂದು ಬೇಸರ ವ್ಯಕ್ತಪಡಿಸಿದರು.
ನಮಗೆ ನಿಮ್ಮ ತಾತ್ಕಾಲಿಕ ಪರಿಹಾರ ಬೇಡವೇ ಬೇಡ. ಕಾರವಾರ ಅಂಕೋಲಾ ಕ್ಷೇತ್ರದ ಜನರಿಗೆ ಶಾಶ್ವತ ಪರಿಹಾರ ಕೊಡಿ. ಸಿಎಂ ಸಿದ್ದರಾಮಯ್ಯನವರು ದಯವಿಟ್ಟು ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮುಂದಾಗಬೇಕು. ಪ್ರತಿ ವರ್ಷ ಮಳೆ ಬಂದಾಗ ಇದೇ ರೀತಿ ಪರಿಸ್ಥಿತಿ ಉಂಟಾಗುತ್ತದೆ ಎಂದು ಕಾರವಾರ ಅಂಕೋಲ ಕ್ಷೇತ್ರದ ಶಾಸಕ ಸತೀಶ್ ಸೈಲ್ ಹೇಳಿಕೆ ನೀಡಿದರು.