ಕೇರಳ: ಶಿರೂರಿನ ಭೂ ಕುಸಿತದಲ್ಲಿ ಮೃತಪತ್ತಿದ್ದ ಕೇರಳದ ಅರ್ಜುನ್ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೇರಳದ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂಕುಸಿತದಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು.
ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ತಿಳಿಸಿದರು.
ಕಳೆದ 6 ದಿನಗಳಿಂದ ಸತತವಾಗಿ ಕಾರ್ಯಾಚರಣೆ ನಡೆಸಿದ ಬಳಿಕ ಇಂದು ಕೇರಳ ಮೂಲದ ಅರ್ಜುನ್ ಮೃತದೇಹ ಹಾಗೂ ಆತ ಚಲಾಯಿಸುತ್ತಿದ್ದ ಭಾರತ್ ಬೆಂಜ್ ಲಾರಿ ಪತ್ತೆಯಾಗಿದೆ. ಲಾರಿಯನ್ನು ಮೇಲೆತ್ತುವಾಗ ಚಾಲಕ ಅರ್ಜುನ ಮೃತದೇಹ ಎರಡು ತುಂಡಾಗಿದ್ದದ್ದು ಕಂಡು ಬಂದಿದೆ. ಅರ್ಜುನ್ ಮೃತದೇಹದ ಜೊತೆಗೆ ಇನ್ನೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಅದು ಯಾರದು ಎನ್ನುವುದು ಇನ್ನೂ ಖಚಿತವಾಗಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.