ಉತ್ತರಕನ್ನಡ : ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ನಾಪತ್ತೆಯಾಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು, ನಾಪತ್ತೆಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಗೋವಾದಲ್ಲಿ ಬೋಟ್ ರಿಪೇರಿ ಕೆಲಸ ಮಾಡುತ್ತಿದ್ದ ಲೊಕೇಶ್, ಜ್ವರದಿಂದಾಗಿ ರಜೆ ಪಡೆದು ಮನೆಗೆ ಬಂದಿದ್ದರಂತೆ. ಗುಡ್ಡ ಕುಸಿದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ತೆರಳಿದ್ದಾರೆ. ಆದರೆ ಕಳೆದ ಐದು ದಿನಗಳಿಂದಲೂ ಮನೆಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈಗಾಗಲೇ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆ ಆಗಿರುವ ಹಲವರ ಮೃತ ದೇಹಗಳು ಇದೀಗ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಸ್ ಡಿ ಆರ್ ಎಫ್ ತಂಡದ ಸಿಬ್ಬಂದಿಗಳು ಪತ್ತೆ ಹಚ್ಚಿ ಹೊರ ತೆಗೆದಿದ್ದು, ಇನ್ನೂ ಹಲವರು ಈ ಒಂದು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ಮುಂದುವರೆದಿದೆ ಘಟನಾ ಸ್ಥಳಕ್ಕೆ ಸಚಿವರು, ಶಾಸಕರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.