ಮುಂಬೈ(ಮಹಾರಾಷ್ಟ್ರ): ಕಳಪೆ ಗುಣಮಟ್ಟದ ಆಹಾರ ನೀಡಿದ್ದಕ್ಕಾಗಿ ಏಕನಾಥ್ ಶಿಂಧೆ ಅವರ ಪಾಳೆಯದ ಶಿವಸೇನೆ ಶಾಸಕರೊಬ್ಬರು ಕೇಟರಿಂಗ್ ಸೇವೆಯ ವ್ಯವಸ್ಥಾಪಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟದ ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರಿಗೆ ಬಡಿಸಲಾಗುತ್ತಿರುವ ಕಳಪೆ ಗುಣಮಟ್ಟದ ಆಹಾರಕ್ಕಾಗಿ ಮ್ಯಾನೇಜರ್ಗೆ ಶಾಸಕ ಸಂತೋಷ್ ಬಂಗಾರ್ ನಿಂದಿಸಿ ಕಪಾಳಮೋಕ್ಷ ಮಾಡಿದ್ದನ್ನು ವಿಡಿಯೋದಲ್ಲಿ ಕಾಣಬಹುದು.
— Govind Hatwar (@GovindHatwar) August 15, 2022
ಬಂಗಾರ್ ಅವರು ಆಹಾರದ ಗುಣಮಟ್ಟದ ಬಗ್ಗೆ ದೂರು ಸ್ವೀಕರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ದೂರು ಬಂದ ನಂತರ ಅದನ್ನು ಸ್ವತಃ ಪರಿಶೀಲಿಸಲು ಅವರು ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.