ಚಿಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ.
BIGG NEWS: ಶಾಸಕ ಶಿವನಗೌಡ ನಾಯಕ್ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ
ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್ಪೋಸ್ಟ್ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ ಮತ್ತು ನಾಡದ್ರೋಹಿ ಎಂಇಎಸ್ ಎಂದಿನಂತೆ ತನ್ನ ಖಯಾಲಿ ಮುಂದುವರಿಸಿದೆ.
BIGG NEWS: ಶಾಸಕ ಶಿವನಗೌಡ ನಾಯಕ್ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ
ಪ್ರತಿ ವರ್ಷದ ಪದ್ಧತಿಯಂತೆ ಈ ಬಾರಿಯೂ ನಮಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಪ್ರವೇಶಕ್ಕೆ ಶಿವಸೇನೆ ಮುಂದಾಗಿತ್ತು. ಕೊಲ್ಹಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ರಾಜ್ಯ ಪ್ರವೇಶಕ್ಕೆ ಮುಂದಾದ ಶಿವಸೇನೆಯ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಕುಗನೊಳ್ಳಿ ಚೆಕ್ಪೋಸ್ಟ್ ಬಳಿ ತಡೆದಿದ್ದಾರೆ.