ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಹಿರಿಯ ಐಎಎಸ್ ಅಧಿಕಾರಿ ಶಿವಕುಮಾರ್ ಕೆ. ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಇಲ್ಲಿಯವರೆಗೆ ಬಿಎಂಟಿಸಿ (BMTC) ವ್ಯವಸ್ಥಾಪಕ ನಿರ್ದೇಶಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಅವರನ್ನು ಸರ್ಕಾರ ಕೆಎಸ್ಆರ್ಟಿಸಿಗೆ ವರ್ಗಾವಣೆ ಮಾಡಿದೆ.
ಇಲ್ಲಿಯವರೆಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ಸಮವರ್ತಿತ ಪ್ರಭಾರವನ್ನು (ಪ್ರಭಾರಿ ಎಂಡಿ) ಹೊತ್ತಿದ್ದ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಡಾ. ಸೆಲ್ವಮಣಿ ಆರ್. (IAS) ಅವರು ನೂತನ ಎಂಡಿ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.








