ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಈತನಕ 274 ಸ್ಯಾಂಪಲ್‌ಗಳನ್ನು ಪರೀಕ್ಷೆ ಮಾಡಿದ್ದು ಈತನಕ ಯಾವುದೇ ಸೋಂಕು ಕಂಡು ಬಂದಿಲ್ಲ. ಹೊಸನಗರ ತಾಲ್ಲೂಕಿನಲ್ಲಿ 169 ಸ್ಯಾಂಪಲ್‌ಗಳನ್ನು ಪರೀಕ್ಷೆ ಮಡಿದ್ದು 8 ಪ್ರಕರಣ ಪತ್ತೆಯಾಗಿದೆ ಎಂಬುದಾಗಿ ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೆ.ಎಫ್.ಡಿ. ಮತ್ತು ಪಲ್ಸ್ ಪೊಲೀಯೋ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ತಾಲ್ಲೂಕಿನಲ್ಲಿ ಕೆಎಫ್‌ಡಿ ಸಂಬಂಧ ಕಟ್ಟೆಚ್ಚರ ವಹಿಸಲಾಗಿದೆ. ಹೊಸನಗರ ತಾಲ್ಲೂಕಿನ ಸೋನಲೆ ವ್ಯಾಪ್ತಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಾಥಮಿಕ ಕೇಂದ್ರವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಜನರ ರಕ್ತಮಾದರಿ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಸಾಗರ ಉಪವಿಭಾಗೀಯ ಅಸ್ಪತ್ರೆಯಲ್ಲಿ ಮಂಗನ ಕಾಯಿಲೆಗಾಗಿ 10 ಬೆಡ್‌ನ ವಿಶೇಷ ಘಟಕ ಪ್ರಾರಂಭಿಸಲಾಗಿದೆ. ಕೆಲವು ಪ್ರಮುಖ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ನವೆಂಬರ್‌ನಿಂದ ಜೂನ್‌ವರೆಗೆ ಜ್ವರ, ವಾಂತಿ, ತಲೆನೋವು, ಮೈಕೈನೋವು ಇನ್ನಿತರೆ ಸೋಂಕು ಕಂಡು ಬಂದರೆ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಬೇಕು. ಎರಡು ಮೂರು ದಿನಗಳಲ್ಲಿ ಕಡಿಮೆಯಾಗದೆ ಇದ್ದರೆ ಉಪವಿಭಾಗೀಯ ಅಸ್ಪತ್ರೆಗೆ ಚಿಕಿತ್ಸೆಗೆ ಒಳಪಡಬೇಕು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಸಂಬ0ಧಿಸಿದ0ತೆ ಕಟ್ಟುನಿಟ್ಟಿನ ತಪಾಸಣಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಾಗರ ಉಪವಿಭಾಗೀಯ ಕೇಂದ್ರವ್ಯಾಪ್ತಿಯಲ್ಲಿ ಪಲ್ಸ್ ಪೊಲೀಯೋ ಹಾಕುವ ಕೆಲಸವನ್ನು ಅತ್ಯಂತ ಯಶಸ್ವಿಯಾಗಿ ಮಾಡಲಾಗಿದೆ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ದೂರ ಮಾಡಬೇಕು. ಪೊಲೀಯೋ ಹನಿ ಹಾಕಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಶಿವಮೊಗ್ಗದ ವಿಡಿಎಲ್ ಮುಖ್ಯ ವೈದ್ಯಾಧಿಕಾರಿ ಡಾ.ಹರ್ಷವರ್ಧನ್ ಮಾತನಾಡಿ, ಯಾವುದೇ ಪ್ರದೇಶದಲ್ಲಿ ಮಂಗಗಳು ಸಾವನ್ನಪ್ಪಿದರೆ, ಆತಂಕದ ಸಂಗತಿಯಾಗಿದೆ. ಅದನ್ನು ಗಂಭೀರವಾಗಿ ತೆಗೆದುಕೊಳ್ಳಲೇಬೇಕು. ಅಂತಹಾ ಪ್ರದೇಶಗಳನ್ನು ಗುರುತಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ಏಕೆಂದರೆ, ಮಂಗಗಳ ಅಸಹಜ ಸಾವು ಎಚ್ಚರಿಕೆಯ ಗಂಟೆ ಎಂದು ಪ್ರತಿಯೊಬ್ಬರೂ ಪರಿಗಣಿಸಬೇಕು. ಮಂಗಗಳ ಸಾವಿನ ವರದಿಯನ್ನು ತಕ್ಷಣ ಇಲಾಖೆಗೆ ಮಾಡತಕ್ಕದ್ದು ಎಂದ ಅವರು ಮಂಗನ ಖಾಯಿಲೆ ಪ್ರಸರಣ ತಡೆಯಲು ಮತ್ತು ನಿಯಂಯತ್ರಿಸಲು ಬಿಡುಗಡೆ ಮಾಡಿರುವ ನೂತನ ಮಾರ್ಗಸೂಚಿ ಮತ್ತು ಕ್ರಿಯಾ ಯೋಜನೆಯ ಬಗ್ಗೆ ಸಂಪೂರ್ಣ ವಿವರವನ್ನು ಸಚಿತ್ರ ಸಹಿತ ಮಾಹಿತಿಯನ್ನು ಸಭೆಗೆ ನೀಡಿದರು.
ಈ ಸಭೆಯಲ್ಲಿ ಸಾಗರ ತಹಶೀಲ್ದಾರ್ ರಶ್ಮಿ ಜೆ.ಎಚ್., ಕಾರ್ಯನಿರ್ವಾಹಣಾಧಿಕರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದಸ್ವಾಮಿ , ಡಾ. ರವೀಂದ್ರ, ಡಿಹೆಚ್ಓ ಡಾ.ನಾಗರಾಜ ನಾಯ್ಕ್, ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಎಎಂಓ ಡಾ.ಸುರೇಶ್, ದೇವರಾಜ್, ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಟಿ.ಪಿ., ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಅನಿಲ್ ಅರಣ್ಯ, ಪಶುಪಾಲನಾ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಿಂದ ಅಕ್ಷರ್ ಪಟೇಲ್ ಔಟ್ | Axar Patel Ruled Out
BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ








