Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ
KARNATAKA

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಮಾ. 6ರಂದು ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯೋತ್ಸವ ಅಂಗವಾಗಿ ಬೃಹತ್ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭಜರಂಗ ದಳದ ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ಆಶ್ರಯದಲ್ಲಿ ಸಂಜೆ 5ಕ್ಕೆ ಗಾಂಧಿ ಮೈದಾನದಲ್ಲಿ ಬೃಹತ್ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಹಿಂದೂ ಸಾಮ್ರಾಜ್ಯೋತ್ಸವ ಅಂಗವಾಗಿ ಮಧ್ಯಾಹ್ನ 2-30ಕ್ಕೆ ಮಹಾಗಣಪತಿ ದೇವಸ್ಥಾನದಿಂದ ಸಂಭ್ರಮದ ಶೋಭಾಯಾತ್ರೆ ನಡೆಯಲಿದೆ. ಶೋಭಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿದ್ದು, ಸಹಸ್ರಾರು ಹಿಂದೂ ಬಾಂಧವರು, ಪ್ರಮುಖರು, ಸಂಘಸಂಸ್ಥೆಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಇರುವ ಶೋಭಯಾತ್ರೆ ಸಂಚರಿಸಲಿದೆ ಎಂದು ಹೇಳಿದರು.

ಸಂಜೆ 5ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗ ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ವಹಿಸಲಿದ್ದಾರೆ. ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯದರ್ಶಿ ಹಾಗೂ ಅಯೋಧ್ಯೆ ರಾಮಮಂದಿರ ಕಟ್ಟಡ ನಿರ್ಮಾಣದ ಉಸ್ತುವಾರಿ ಗೋಪಾಲ್ ಜಿ. ಉದ್ಘಾಟಿಸಲಿದ್ದಾರೆ. ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಾಂತ ಸುರಕ್ಷಾ ಪ್ರಮುಖರಾದ ರಾಜೇಶ್ ಗೌಡ, ಭಜರಂಗ ದಳದ ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ ಉಪಸ್ಥಿತರಿರುವರು ಎಂದು ತಿಳಿಸಿದರು.

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳ ಹಿಂದುತ್ವ ಜಾಗೃತಿ ಜೊತೆಗೆ ಗೋಸೇವೆ, ಸಾಮಾಜಿಕ ಸೇವೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯದಲ್ಲೂ ತೊಡಗಿಸಿಕೊಂಡಿದೆ. ಈತನಕ 150ಕ್ಕೂ ಹೆಚ್ಚು ಗಾಯಗೊಂಡ ಜಾನುವಾರುಗಳಿಗೆ ಆರೈಕೆ ಮಾಡಿದೆ. 150ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹ ಮಾಡಿ ರಕ್ತನಿಧಿ ಕೇಂದ್ರಕ್ಕೆ ನೀಡಲಾಗಿದೆ. 130ಕ್ಕೂ ಹೆಚ್ಚು ಗೋ ಸಂರಕ್ಷಣೆ ಮಾಡಲಾಗಿದೆ. ಜೊತೆಗೆ ನಗರದ ಬೇರೆಬೇರೆ ಭಾಗಗಳಲ್ಲಿ ಸಸಿ ನೆಟ್ಟು ಪೋಷಣೆ ಮಾಡಲಾಗಿದೆ ಎಂದು ಹೇಳಿದರು.

ಈ ಸುದ್ದಿಗೋಷ್ಟಿಯಲ್ಲಿ ಕೆ.ವಿ.ಪ್ರವೀಣ್, ಸುನೀಲ್ ರುದ್ರಪ್ಪ, ಮಂಜು ಗೌಡ, ಸೋಮು ಹೆಗ್ಗೋಡು, ದೀಪಕ್, ಪ್ರಜೀತ್ ಹಾಜರಿದ್ದರು.

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

1 Min Read

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

1 Min Read

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
Recent News

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

State News
KARNATAKA

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: “ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಶುಚಿರುಚಿಯಾದ ಆಹಾರವನ್ನು ನೀಡಬೇಕು. ಹಾಸ್ಟೆಲ್ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ, ಮಕ್ಕಳು ಸಹ ಶುಚಿತ್ವ ಕಾಪಾಡಿಕೊಳ್ಳುವಂತೆ…

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.