ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ದಿನಾಂಕ 20-09-2025ರಂದು ಕರೆಯಲಾಗಿದೆ.
ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದಂದು ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ನಿಗದಿ ಪಡಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್ ನಾಗೇಂದ್ರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯ ಸಾಮಾನ್ಯ ಸಭೆಯನ್ನು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ.
ಈ ಸಭೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಸಾಗರ-ಹೊಸನಗರ ತಾಲ್ಲೂಕು ಶಾಸಕರಾದಂತ ಗೋಪಾಲಕೃಷ್ಣ ಬೇಳೂರು ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸದಸ್ಯರೆಲ್ಲರೂ ಹಾಜರಿರುವಂತೆ ತಿಳಿಸಲಾಗಿದೆ.
ಇನ್ನೂ ಶ್ರೀ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಸದಸ್ಯರುಗಳಿಗೆ ಈಗಾಗಲೇ ಸಭೆಯ ನೋಟಿಸ್ ಅನ್ನು ಅವರವರ ವಿಳಾಸಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದುಕೊಂಡಿದ್ದರು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ