ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವಂತ ಘಟನೆ ಸಾಗರದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. 3 ವರ್ಷದ ಬಾಲಕನ ಮೇಲೆ ದಾಳಿ ನಡೆಸಿರುವಂತ ಬೀದಿ ನಾಯಿಗಳು, ಮುಖ ಸೇರಿದಂತೆ ಹಲವೆಡೆ ಕಚ್ಚಿ ಗಾಯಗೊಳಿಸಿದೆ.
ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ 3 ವರ್ಷದ ಬಾಲಕನನ್ನು ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತಂದೆ ರಶೀದ್ ಕರೆದೊಯ್ದಿದ್ದಾರೆ.
ಬಾಲಕನಿಗೆ ಕಚ್ಚಿದ ಬಳಿಕ ಮತ್ತೊಬ್ಬ ಮಹಿಳೆ ಮೇಲೂ ನಾಯಿ ದಾಳಿ ನಡೆಸಿದೆ. ಬೀದಿ ನಾಯಿಗಳನ್ನು ನಿಯಂತ್ರಿಸದಂತ ಸಾಗರ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಬೀದಿ ನಾಯಿ ನಿಯಂತ್ರಿಸುವಂತೆ ಒತ್ತಾಯಿಸಿದ್ದಾರೆ.
BIG NEWS: ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್