ಶಿವಮೊಗ್ಗ: ಸೊರಬದ ಕ್ಯಾಸನೂರಲ್ಲಿ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಅವಾಂತರವೇ ಉಂಟಾಗಿದೆ. ಸೊರಬ ತಾಲ್ಲೂಕಿನ ಕ್ಯಾಸನೂರಲ್ಲಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಕ್ಯಾಸನೂರು ಗ್ರಾಮದ ವಾಸಪ್ಪ ಎಂಬುವವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮನೆ ಮತ್ತು ಕಾರು ನಿಲ್ಲಿಸುವ ಜಾಗದ ಮಧ್ಯಭಾಗ ಮರ ಬಿದ್ದಿದ್ದು ಕಾರಿಗೆ ಯಾವುದೇ ಹಾನಿಯಾಗಿಲ್ಲ. … Continue reading ಶಿವಮೊಗ್ಗ: ಸೊರಬದ ಕ್ಯಾಸನೂರಲ್ಲಿ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ