ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಬ್ಬಕ್ಕೆ ತವರು ಮನೆಗೆ ಬಂದಿದ್ದಾಗ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಮನೆಯ ಜಗುಲಿಯಲ್ಲಿ ರಂಜಿತ (28) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಮೊದಲು ಮದುವೆಯಾಗಿ ರಂಜಿತ ವಿಚ್ಛೇದನ ಪಡೆದುಕೊಂಡಿದ್ದರು. ಸಾಗರದ ಆನಂದಪುರದಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಎರಡನೇ ಮದುವೆ ಕೂಡ ಆಗಿದ್ದರು ಕಳೆದ ನಾಲ್ಕು ತಿಂಗಳ ಹಿಂದೆ ಅಷ್ಟೇ ಎರಡನೇ ಮದುವೆ ಆಗಿದ್ದರು. ಇತ್ತೀಚಿಗೆ ಅಷ್ಟೇ ಪತಿ ಪತಿಯ ಮಧ್ಯೆ ಜಗಳ ನಡೆದಿತ್ತು. ಹಾಗಾಗಿ ತವರು ಮನೆಗೆ ಹಬ್ಬಕ್ಕೆ ಎಂದು ಬಂದಾಗ ರಂಜಿತ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.