ಶಿವಮೊಗ್ಗ: ಮಾ.3 ರ ಭಾನುವಾರದಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ.
0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು.
ಮಾ.03 ರಂದು 120626 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಭಟ್ಟಿಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಂಡು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಜಿಲ್ಲೆಯಾದ್ಯಂತ 1037 ಲಸಿಕಾ ಬೂತ್‍ಗಳಲ್ಲಿ ಲಸಿಕೆ ಹಾಕಲಾಗುವುದು.
ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‍ಗಳಾಗಿ ಕಾರ್ಯ ನಿರ್ವಹಿಸುತ್ತಾರೆ.
ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು ತೆರೆಯಲಾಗುತ್ತದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಮಾ.3 ರಂದು ಭಾನುವಾರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‍ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಉಚಿತವಾಗಿ ನಿಡಲಾಗುವುದು. ಸಾರ್ವಜನಿಕರು ಈ ಲಸಿಕಾ ಬೂತ್‍ಗಳಿಗೆ ತಮ್ಮ 0 ಯಿಂದ 5 ವರ್ಷದ ಮಕ್ಕಳನ್ನು ಕರೆತಂದು ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ.
ಕೇಂದ್ರ ಸರ್ಕಾರದ ಮದ್ಯಪ್ರವೇಶ: ‘ಗೂಗಲ್ ಪ್ಲೇ ಸ್ಟೋರ್’ನಲ್ಲಿ ‘Naukri, 99acres ಆ್ಯಪ್’ ಮರು ಸೇರ್ಪಡೆ