ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಸ್ಥಾನವನ್ನು ವಜಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಅವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ಘಟಕ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಘಟಕದ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳ ಸ್ಥಾನದಿಂದ ಇಂದಿನಿಂದ ವಜಾ ಮಾಡಲಾಗಿದೆ ಎಂದಿದ್ದಾರೆ.
ಇನ್ನೂ ಅತಿ ಶೀಘ್ರದಲ್ಲೇ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಶಿವಮೊಗ್ಗ ಕರವೇ ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ತಿಳಿಸಿದ್ದಾರೆ.
ಪ್ರಯಾಣಿಕರ ಗಮನಕ್ಕೆ: ಮಿರಜ್-ಕ್ಯಾಸಲ್ ರಾಕ್-ಮಿರಜ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ
BIG NEWS: ಮಾರ್ಚ್.29ರಂದು ‘BBMP ಬಜೆಟ್ 2025-26’ ಮಂಡನೆ | BBMP Budget 2025