ಶಿವಮೊಗ್ಗ : ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗದ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಸೆ.2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
ಎನಿವೇರ್ ನೋಂದಣಿ ವ್ಯವಸ್ಥೆಯನ್ನು ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ.
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿತ್ತು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆ ಒಳಗೆ ತಮಗೆ ಹತ್ತಿರ ಇರುವ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ಶಿವಮೊಗ್ಗ ಹಿರಿಯ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಗರದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ
ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಸೆ.2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
ಎನಿವೇರ್ ನೋಂದಣಿ ವ್ಯವಸ್ಥೆಯನ್ನು ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ.
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿತ್ತು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆ ಒಳಗೆ ತಮಗೆ ಹತ್ತಿರ ಇರುವ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ಸಾಗರ ತಾಲೂಕು ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಟೆಲ್ ಉದ್ಯೋಗಿಗಳಿಗೆ ಬಿಗ್ ಶಾಕ್: 700ಕ್ಕೂ ಹೆಚ್ಚು ಉದ್ಯೋಗಿಗಳ ವಜಾ | Intel Layoffs