ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ದತಿಯೂ ಅಲ್ಲಲ್ಲಿ ವರದಿಯಾಗಿವೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸೋ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಬೀದಿ ನಾಟಕ ಪ್ರದರ್ಶಿಸಿ, ಅರಿವು ಮೂಡಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಟೀಲು ಅಶೋಕ ಪೈ ಮೆ ಮೋರಿಯಲ್ ಕಾಲೇಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ, ವಿದ್ಯಾರ್ಥಿಗಳಿಂದ ಬಾಲ್ಯ ವಿವಾಹ, ಬಾಲಕಾರ್ಮಿಕ, ಲೈಂಗಿಕ ದೌರ್ಜನ್ಯದ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭದ್ರಾವತಿ ತಾಲೂಕಿನ ತಹಶೀಲ್ದಾರ್ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವರು, ಅಂಗನವಾಡಿ ವಲಯ ಮೇಲ್ವಿಚಾರಕರು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ
ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ