ಶಿವಮೊಗ್ಗ: ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ವಾಹನಗಳ ಮಾರ್ಗ ಬದಲಾವಣೆ
ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.
ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.
ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.
BREAKING : ಹಾರಾಟಕ್ಕೆ ಸಿದ್ಧವಾದ ‘Fly91’ ವಿಮಾನ, ‘DGCA’ನಿಂದ ‘ಏರ್ ಆಪರೇಟರ್ ಪ್ರಮಾಣಪತ್ರ’
ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ