ಶಿವಮೊಗ್ಗ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವು ಸೆ. 22 ರಿಂದ ಅ. 7 ರವರೆಗೆ ನಡೆಯಲಿದ್ದು, ಜಿಲ್ಲೆಯ ನಾಗರೀಕರು ಸಮೀಕ್ಷೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.
ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಆರ್ ಆರ್ ಸಂಖ್ಯೆ ಹೊಂದಿರುವ ಅಂದಾಜು 543925 ಮನೆಗಳಿದ್ದು, ಈಗಾಗಲೇ ಮೀಟರ್ ರೀಡರ್‌ಗಳಿಂದ ಮನೆ ಮನೆಗೆ ಭೇಟಿ ನೀಡಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವು ಈಗಾಗಲೇ ಮುಕ್ತಾಯ ಹಂತಕ್ಕೆ ಬಂದಿದೆ.
ಸಮೀಕ್ಷಾ ಕಾರ್ಯಕ್ಕಾಗಿ ಅಂದಾಜು 4215 ಸಂಖ್ಯೆಯ ಗಣತಿದಾರರನ್ನು ನೇಮಕ ಮಾಡಿದ್ದು, ಸದರಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಆಯೋಗದ ಪ್ರಶ್ನಾವಳಿಗೆ ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ಹಾಗೂ
ಜಿಲ್ಲೆಯಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದಿರುವ ಗ್ರಾಮಗಳಲ್ಲಿರುವ ಕುಟುಂಬಗಳ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ನೆಟ್ವರ್ಕ್ ಸಂಪರ್ಕವಿರುವ ಸಮೀಪದ ಗ್ರಾಮ ಪಂಚಾಯತಿ/ಶಾಲಾ ಕಟ್ಟಡಗಳನ್ನು ಗುರುತಿಸಿದ್ದು ಇಲ್ಲಿ ಸಮೀಕ್ಷೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯಕ್ಕೆ ಗಣತಿದಾರರಿಗೆ ಸಂಪೂರ್ಣ ಸಹಕಾರ ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ನಾಗರಿಕರಲ್ಲಿ ಈ ಮೂಲಕ ಮನವಿ ಮಾಡಿದ್ದಾರೆ.