ಶಿವಮೊಗ್ಗ : ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಣ್ಣು ಸಂಗ್ರಹ ಅಭಿಯಾನಕ್ಕೆ ಅಕ್ಟೋಬರ್ 28ರಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಚಾಲನೆ ನೀಡಲಿದ್ದು, ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದರು.
BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಭಿಯಾನದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲಾ ತಾಲೂಕು ಕೇಂದ್ರಗಳು, ಆಯ್ದ ಗ್ರಾಮಗಳಲ್ಲಿ ಅಭಿಯಾನದ ಕೆಂಪೇಗೌಡ ರಥ ಸಂಚರಿಸಲಿದ್ದು, ಸ್ಥಳೀಯವಾಗಿ ರಥವನ್ನು ಸ್ವಾಗತಿಸಬೇಕು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಪ್ರಗತಿಪರ ರೈತರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿರಲು ಕ್ರಮ ಕೈಗೊಳ್ಳಬೇಕು. ಕೆರೆ, ನದಿ, ಪುಣ್ಯ ಕ್ಷೇತ್ರ, ಐತಿಹಾಸಿಕ ತಾಣಗಳಿಂದ ಸಂಗ್ರಹಿಸಿದ ಮಣ್ಣನ್ನು ಈಗಾಗಲೇ ಒದಗಿಸಲಾಗಿರುವ ಚೀಲದಲ್ಲಿ ತುಂಬಿ ಊರ ಪ್ರಮುಖರ ಸಮ್ಮುಖದಲ್ಲಿ ಹಸ್ತಾಂತರಿಸಬೇಕು ಎಂದು ಹೇಳಿದರು.
ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಕೆಂಪೇಗೌಡ ರಥ ಸಂಚರಿಸುವ ಮಾರ್ಗದ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಅಭಿಯಾನದ ಯಶಸ್ವಿಗೆ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಎಲ್ಲಾ 262 ಗ್ರಾಮ ಪಂಚಾಯತ್ಗಳು, 9 ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣ್ಣನ್ನು ಸಂಗ್ರಹಿಸಲು ಸೂಚಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಂಪೇಗೌಡ ರಥಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡುವರು. ನವೆಂಬರ್ 5ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಎಲ್ಲಾ ಕಡೆಗಳಿಂದ ಸಂಗ್ರಹಿಸಿದ ಮಣ್ಣನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಲಾಗುವುದು ಎಂದು ಹೇಳಿದರು.
BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.