ಶಿವಮೊಗ್ಗ: ಡೆಂಗಿ ನಿಯಂತ್ರಣ ಕಾರ್ಯ ತೀವ್ರಗೊಳಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಕಾರ್ಯಗಳನ್ನು ತೀವ್ರಗೊಳಿಸಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆದ್ಯತೆ ಮೇರೆಗೆ ಡೆಂಗಿ ನಿಯಂತ್ರಣ ಚಟುವಟಿಕೆಗಳಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಡೆಂಗಿ ನಿಯಂತ್ರಣ ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿವಾರ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಭೆ ನಡೆಸಿ, ಡೆಂಗಿ ನಿಯಂತ್ರಣವನ್ನು ಪರಿಣಾಮಕಾರಿಗೊಳಿಸಲಾಗುವುದು. ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಹೆಚ್ಚು ಡೆಂಗಿ ಪ್ರಕರಣಗಳು ಕಂಡು ಬರುತ್ತಿದ್ದು ಮುಂಜಾಗೃತಾ ಕ್ರಮವಾಗಿ … Continue reading ಶಿವಮೊಗ್ಗ: ಡೆಂಗಿ ನಿಯಂತ್ರಣ ಕಾರ್ಯ ತೀವ್ರಗೊಳಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ