ಶಿವಮೊಗ್ಗ: ಸಹಕಾರಿ ಕ್ಷೇತ್ರದಲ್ಲಿ ಇರುವವರು ರೈತರ ಧ್ವನಿಯಾಗಿ ಕೆಲಸ ಮಾಡಬೇಕು. ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಬೇಡಿ ಎಂಬುದಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಪಟ್ಟಣದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನೂತನ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡುತ್ತಾರೆ ಇದಕ್ಕೆ ಯಾವುದೇ ಭದ್ರತೆ ಇರುವುದಿಲ್ಲ ಇದರಿಂದ ನಷ್ಟ ಸಂಭವಿಸಿದರೆ ಜನರೇ ಹೊಣೆ ಹೊರಬೇಕು. ಸಹಕಾರಿ ಬ್ಯಾಂಕ್ ಗಳಲ್ಲಿ ನಾವು ರಾಜಕೀಯ ಮಾಡಬಾರದು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಾಗರ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಬಿ ಆರ್ ಜಯಂತ್ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಪ್ರಾಮಾಣಿಕವಾಗಿ ಇರಬೇಕು ಮತ್ತು ರೈತರ ಬಗ್ಗೆ ಕಾಳಜಿ ಹೊಂದಿರಬೇಕು ಎಂದು ಹೇಳಿದರು.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಜನ್ ರೆಡ್ಡಿ ಮಾತನಾಡಿ ರಾಜ್ಯದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಎರಡನೇ ಸ್ಥಾನದಲ್ಲಿದೆ 2024-25 ನೇ ಸಾಲಿನಲ್ಲಿ 36ಕೋಟಿ ಲಾಭ ಗಳಿಸಿದೆ ಮುಂದಿನ ದಿನಗಳಲ್ಲಿ ಪಶುಸಂಗೋಪನೆ, ಸ್ವಸಹಾಯ ಸಂಘಗಳ ಮೂಲಕ ರೈತರಿಗೆ 1660 ಕೋಟಿ ನೀಡುವ ಗುರಿ ಹೊಂದಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲಾಯಿತು. ತ್ಯಾಗರ್ತಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ ಕೆ ಹನುಮಂತಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಧಶರಥಗಿರಿ, ಪರಮೇಶ್ವರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರಭಾವತಿ ಲೋಕಪ್ಪ, ಇಡುವಳ್ಳಿ ಚರ್ಚಿನ ಧರ್ಮ ಗುರುಗಳಾದ ಥಾಮಸ್, ಮಾಜಿ ಜಿ ಪಂ ಸದಸ್ಯೆ ಅನಿತಾ ಕುಮಾರಿ,ಬರೂರು ಗ್ರಾ ಪಂ ಅಧ್ಯಕ್ಷ ರಮೇಶ, ಪ್ರಮುಖರಾದ ಸೋಮಶೇಖರ್ ಲಾವಿಗ್ಗೆರೆ, ಚೇತನ್ ರಾಜ್ ಕಣ್ಣೂರು, ಕಿರಣ್ ದೊಡ್ಮನೆ ,ರೇಣುಕಾ,ಉಷಾ , ಬಿ ಎಸ್ ವೀರೇಶ್ ಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜರ್ ನಾಗಭೂಷಣ್ ಇನ್ನಿತರರು ಇದ್ದರು.