ಶಿವಮೊಗ್ಗ : ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 22 ರ ರಾತ್ರಿ 10.00 ರಿಂದ 28ರವರೆಗೆ ಪ್ರತಿ ದಿನ 2000 ಕ್ಯುಸೆಕ್ಸ್ಗಳಂತೆ ಒಟ್ಟು 11,574 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಬದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಅವಧಿಯಲ್ಲಿ ಸಾರ್ವಜನಿಕರು ನದಿ ಪಾತ್ರದಲ್ಲಿ ತಿರುಗಾಡುವುದು, ದನಕರುಗಳನ್ನು ನದಿಗೆ ಇಳಿಸುವುದು ಇತ್ಯಾದಿ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದೆ. ಹಾಗೂ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್ಸೆಟ್ಗಳಿಂದ ನೀರೆತ್ತುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ