ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂಧೂರು ಸೇತುವೆ ಕಾಮಗಾರಿಯ ಸಂದರ್ಭದಲ್ಲಿ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂಧೂರು ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಅಸ್ಸಾಂನ ಗೌಹಾಟಿಯ ಕಾರ್ಮಿಕ ಖಾಸಿದ್ ಆಲಿ(30) ಎಂಬಾತ ಸಾವನ್ನಪ್ಪಿದ್ದಾನೆ.
ಮಂಗಳವಾರದಂದು ಬೆಳಗ್ಗೆ ಸೇತುವೆ ಕಾಮಗಾರಿ ನಡೆಯುತ್ತಿದ್ದಂತ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಳಿಯ ರಭಸಕ್ಕೆ ಕ್ರೈನ್ ಕ್ಲಾಂಪ್ ಕಳಚಿ ಕಾರ್ಮಿಕನ ತಲೆಯ ಮೇಲೆ ಬಿದ್ದ ಕಾರಣ, ತಲೆಗೆ ಗಂಭೀರವಾಗಿ ಗಾಯಗೊಂಡಿದ್ದನು. ಇಂತಹ ಕಾರ್ಮಿಕನನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಸಿಗಂಧೂರು ಸೇತುವೆ ಕಾಮಗಾರಿಯ ಸಂದರ್ಭದಲ್ಲಿ ನಡೆದಿರುವಂತ ಈ ದುರಂತದ ಬಗ್ಗೆ ಸಂಸದ ಬಿವೈ ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ಕಾರ್ಮಿಕನ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಸಂತಾಪ ಸೂಚಿಸಿದ್ದಾರೆ.
ಬಲೂಚಿಸ್ತಾನ್ ಶಾಲಾ ಬಸ್ ದಾಳಿ ಬಗ್ಗೆ ಪಾಕಿಸ್ತಾನದ ಆರೋಪ ತಿರಸ್ಕರಿಸಿದ ಭಾರತ