ಶಿವಮೊಗ್ಗ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.
ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಬೇಕಾದ ವ್ಯವಸ್ಥೆಯನ್ನು ಅ.07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಅ.07 ರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಲಾಗುತ್ತದೆ ಎಂದು ಹಿರಿಯ ಉಪನೋಂದಣಾಧಿಕಾರಿಗಳು ತಿಳಿಸಿದ್ದಾರೆ.
ಚಾರಣಿಗರಿಗೆ ಗುಡ್ ನ್ಯೂಸ್: ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ, ಈ ರೀತಿ ಕಾಯ್ದಿರಿಸಿ
150 ಎಕರೆ ಪ್ರದೇಶದಲ್ಲಿ ‘ಮೈಸೂರು ಫಿಲಂ ಸಿಟಿ’ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ