ಶಿವಮೊಗ್ಗ: ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ – ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಶಿವಮೊಗ್ಗ: ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಇದುವರೆಗೆ 64130 ಮೆ.ಟನ್ ರಸಗೊಬ್ಬರ ಪೂರೈಕೆಯಾಗಿದೆ. ಇದರಲ್ಲಿ 47910 ಮೆ.ಟನ್ ರಸಗೊಬ್ಬರ ವಿತರಣೆ … Continue reading ಶಿವಮೊಗ್ಗ: ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ – ಜಿಲ್ಲಾಧಿಕಾರಿ ಡಾ.ಸೆಲ್ವಮಣಿ