ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ ಅವಧಿಯನ್ನು ಆ.25 ರವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1 , 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/
ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.50 ಲಕ್ಷ ಹಾಗೂ ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಪೋಷಕರ ವಾರ್ಷಿಕ ಆದಾಯವು 1 ಲಕ್ಷದೊಳಗಿರಬೇಕು.
ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ ಇಮೇಲ್ ವಿಳಾಸ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಹಾಯವಾಣಿ ಸಂಖ್ಯೆ 8050770004, 8050770005 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ
ಭಾರತದಲ್ಲಿ ಮೊದಲ ಬಾರಿಗೆ: ವಂತಾರದಿಂದ ‘ಪಶುವೈದ್ಯಕೀಯ ತರಬೇತಿ ಕೋರ್ಸ್’ ಆರಂಭ