ಶಿವಮೊಗ್ಗ: ಜಿಲ್ಲೆಯಲ್ಲಿ ಸಾಲದ ಬಾಧೆಯಿಂದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಐದು ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಮೇಘರಾಜ್ ಬಿ.ಹೆಚ್ (43) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಘರಾಜ್ ಮೂಲತಃ ರೈತರಾಗಿದ್ದು, 5 ಲಕ್ಷ ರೂ.ಗಳಿಗೂ ಅಧಿಕ ಬೆಳೆಗಾಗಿ ಸಾಲ ತೆಗೆದುಕೊಂಡಿದ್ದ ಎಂಬುದಾಗಿ ಹೇಳಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹಾಗೂ ಗೋಲ್ಡ್ ಲೋನ್, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲವನ್ನು ಮೇಘರಾಜ್ ಮಾಡಿದ್ದರು ಎಂಬುದಾಗಿ ಹೇಳಲಾಗುತ್ತಿದೆ.
ಕಳೆದ ಮೂರು ವರ್ಷದಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಮೇಘರಾಜ್ ಅವರ ಕೈಗೆ ಬೆಳೆ ಸರಿಯಾಗಿ ಸಿಕ್ಕಿರಲಿಲ್ಲ. ಈ ಹಿನ್ನಲೆಯಲ್ಲಿ ಹಿನ್ನೆಲೆ ಹಾಗೂ ಬೆಳೆ ಹಾನಿಯ ಕಾರಣದಿಂದಾಗಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.