ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಅರಲಗೋಡು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುತ್ತಿದ್ದು, ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತ್ರ/ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿಯಿಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
BIGG NEWS: ‘ಮುರುಘಾಶ್ರೀ’ಗಳ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ: ಯಾರಾಗ್ತಾರೆ ‘ಹೊಸ ಪೀಠಾಧಿಪತಿ’.? ಇಲ್ಲಿದೆ ಪಟ್ಟಿ
ಚುನಾವಣೆಯ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾ ಆಡಳಿತವು ಕೈಗೊಂಡ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸುವಂತೆ ಸೂಚಿಸಿದ್ದಾರೆ.
ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ : ಸಿಎಂ ಬಸವರಾಜ ಬೊಮ್ಮಾಯಿ
ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿಐಎಸ್ಎಸ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರಾತಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಅಧಿಕೃತ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.