ಶಿವಮೊಗ್ಗ: ಸಾಗರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಸ್ಥಾನಕ್ಕೆ ಸಾಗರ ಟೌನ್ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯದ ಹಾಸ್ಟೆಲ್ ಸೂಪರಿಡೆಂಟ್ ಜೈಶೀಲ.ಬಿ ಅವರು ಸ್ಪರ್ಧಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಾಗರ ತಾಲ್ಲೂಕು ಕಾರ್ಯಕಾರಿ ಸಮಿತಿ ಚುನಾವಣೆ 2024-29 ಘೋಷಣೆಯಾಗಿದೆ. ಈ ಚುನಾವಣೆಯ ಸಲುವಾಗಿ ಬಿಸಿಎಂ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದೇನೆ. ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ದಿನಾಂಕ 28-10-2024ರಂದು ನಡೆಯಲಿರುವಂತ ಮತದಾನದಲ್ಲಿ ಭಾಗಿಯಾಗಿ, ತಮಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.
ತಾನು ಬಿಸಿಎಂ ಇಲಾಖೆಯ ಸಮಸ್ತ ನೌಕರರ ಶ್ರೇಯೋಭಿವೃದ್ಧಿಗಾಗಿ ದುಡಿಯಲಿದ್ದೇನೆ. ಜ್ಯೋತಿ ಸಂಜೀವಿನಿ, ಉಚಿತ ವೈದ್ಯಕೀಯ ಚಿಕಿತ್ಸೆ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ಬಡ್ತಿ ಸೇರಿದಂತೆ ನೌಕರರ ಇತರೆ ಸಮಸ್ಯೆಗಳ ಯಾವುದೇ ತರಹದ ಹೋರಾಟಕ್ಕೂ ಬದ್ಧನಾಗಿರುವುದಾಗಿ ಹೇಳಿದ್ದಾರೆ.
ದಿನಾಂಕ 28-10-2024ರಂದು ಸಾಗರ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಂದು ತನ್ನ ಕ್ರಮ ಸಂಖ್ಯೆ 2ಕ್ಕೆ ಮತ ನೀಡಿ ಗೆಲುವು ಸಾಧಿಸಲು ನೆರವಾಗುವಂತೆ ಮನವಿ ಮಾಡಿದ್ದಾರೆ.
‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ’ಗೆ ಅರ್ಜಿ ಆಹ್ವಾನ
ಪಟಾಕಿ ನಿರ್ಬಂಧ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಈ ತಿರುಗೇಟು ಕೊಟ್ಟ ‘ಸಚಿವ ಈಶ್ವರ್ ಖಂಡ್ರೆ’