ಶಿವಮೊಗ್ಗ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು ತಿಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜನ್ಮದಿನ ಸಂದರ್ಭದಲ್ಲಿ ಸಂಘವು ಪ್ರಶಸ್ತಿ ಘೋಷಣೆ ಮಾಡಿದ್ದು, ಅದನ್ನು ನವೆಂಬರ್ 9ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಜೆ 7ಕ್ಕೆ ಪ್ರದಾನ ಮಾಡಲಾಗುತ್ತಿದೆ ಎಂದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನ. 7,8 ಮತ್ತು 9ರಂದು ನಗರವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳು, ಅಧಿಕಾರಿಗಳನ್ನು ಒಳಗೊಂಡ ತಂಡಗಳ ನಡುವೆ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಸೌಹಾರ್ದ ಕ್ರಿಕೇಟ್ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ನಗದು ಬಹುಮಾನ ಇರುತ್ತದೆ. ದೀಪಾವಳಿ ಸಂದರ್ಭದಲ್ಲಿ ಗಾಂಧಿನಗರ ಭಾಗದ ಮಹಿಳೆಯರಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ. ನಂತರ ಸ್ವರಾಂಜಲಿ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ಇದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.
ಈ ವೇಳೆ ಗೋಷ್ಟಿಯಲ್ಲಿ ರಾಮಣ್ಣ, ರಾಘು, ರಾಮು, ಡಾ. ಶ್ರೀಪಾದ, ರವಿ, ಪ್ರವೀಣ್ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು
BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ








