ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಮೇ-16 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರ ಕಚೇರಿ, ನಉವಿ-3, ಗುಡ್‍ಲಕ್ ಸರ್ಕಲ್, ಎಸ್.ವಿ.ಬಡಾವಣೆ, ಶಿವಮೊಗ್ಗ ಇಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೇ- 20 ರಂದು ಡಾಕ್ ಅದಾಲತ್
ಶಿವಮೊಗ್ಗ ಅಂಚೆ ವಿಭಾಗವು ಮೇ- 20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ. ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್ ಅದಾಲತ್‍ನಲ್ಲಿ ಭಾಗವಹಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BREAKING: ‘ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ’ ಸೇರಿ ಇಬ್ಬರ ವಿರುದ್ಧ ‘FIR’ ದಾಖಲು
BREAKING: ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್ | HD Revanna