ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲೂಕಿನ ದೂಗೂರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು. ಆ ಮೂಲಕ ಅಭಿವೃಧ್ದಿಗೆ ಪಣ ತೊಡುವ ಘೋಷಣೆ ಮಾಡಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಮತಕ್ಷೇತ್ರ ಸೊರಬ ತಾಲೂಕಿನ ದುಗೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಸಿ.ಸಿ ರಸ್ತೆ, ಬಾಕ್ಸ್ ಚರಂಡಿ, ಮೀನು ಮತ್ತು ಮಾಂಸ ಮಾರುಕಟ್ಟೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಥಳೀಯ ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಶಾಲೆ, ಬಸ್ ನಿಲುಗಡೆ ವ್ಯವಸ್ಥೆಯನ್ನು ಶೀಘ್ರವಾಗಿ ಅನುದಾನ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸೊರಬ ತಹಶೀಲ್ದಾರ್ ಮಂಜುಳಾ ಹೆಗಡೆವಾರ್, ಇಒ ಪ್ರದೀಪ್ ಕುಮಾರ್, ಬಿಇಒ ಪುಷ್ಪ ಆರ್, ಗ್ರಾ.ಪಂ ಅಧ್ಯಕ್ಷರಾದ ಫಯಾಜ್ ಅಹಮದ್, ಉಪಾಧ್ಯಕ್ಷರಾದ ಗೌರಮ್ಮ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!