ಶಿವಮೊಗ್ಗ: ಮೇ 07 ರಂದು ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಸೋಮವಾರ ಮತಗಟ್ಟೆಗಳಿಗೆ ಅಗತ್ಯವಾದ ಎಲ್ಲ ಪರಿಕರಗಳೊಂದಿಗೆ ಮಸ್ಟರಿಂಗ್ ಕೇಂದ್ರಗಳಲ್ಲಿ ಸಿದ್ದತೆಗಳನ್ನು ಮಾಡಿಕೊಂಡು ಹೊರಡುವ ದೃಶ್ಯ ಸಾಮಾನ್ಯವಾಗಿತ್ತು.

ಮಸ್ಟರಿಂಗ್ ಕೇಂದ್ರಗಳು : 111-ಶಿವಮೊಗ್ಗ ಗ್ರಾಮಾಂತರ ಮತಕ್ಷೇತ್ರಕ್ಕೆ ಹೆಚ್‍ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಶಿವಮೊಗ್ಗ, 112-ಭದ್ರಾವತಿ ಮತಕ್ಷೇತ್ರಕ್ಕೆ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಭದ್ರಾವರಿ, 113-ಶಿವಮೊಗ್ಗ ಮತಕ್ಷೇತ್ರಕ್ಕೆ ಸಹ್ಯಾದ್ರಿ ಕಾಮರ್ಸ್ ಆಂಡ್ ಮ್ಯಾನೇಜ್‍ಮೆಂಟ್ ಕಾಲೇಜು, 114-ತೀರ್ಥಹಳ್ಳಿಗೆ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜ್ ತೀರ್ಥಹಳ್ಳಿ, 115- ಶಿಕಾರಿಪುರ ಮತಕ್ಷೇತ್ರಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ, 116-ಸೊರಬ ಮತಕ್ಷೇತ್ರಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೊರಬ ಹಾಗೂ 117-ಸಾಗರ ಮತಕ್ಷೇತ್ರಕ್ಕೆ ಸರ್ಕಾರಿ ಜ್ಯೂನಿಯರ್ ಪಿಯು ಕಾಲೇಜು, ಸಾಗರ ಮಸ್ಟರಿಂಗ್ ಕೇಂದ್ರಗಳಾಗಿವೆ.

ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ದಿನಗಳಂದು ಕರ್ತವ್ಯಕ್ಕೆ ನಿಯೋಜಿಸಿದ ಚುನಾವಣಾ ಸಿಬ್ಬಂದಿಗಳನ್ನು ಸಂಬಂಧಿಸಿದ ಮತಗಟ್ಟೆ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಅನುಕೂಲವಾಗುವಂತೆ 269 ಬಸ್‍ಗಳು, 07 ಮೀಸಲು ಬಸ್ ಮತ್ತು 13 ಮಿನಿ ಬಸ್ ಸೇರಿದಂತೆ 289 ಬಸ್‍ಗಳ ನಿಯೋಜನೆ ಮಾಡಲಾಗಿದೆ.

ನಗರದ ಹೆಚ್ ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮೈದಾನ ಸೇರಿದಂತೆ ಎಲ್ಲ ಮಸ್ಟರಿಂಗ್ ಕೇಂದ್ರಗಳಲ್ಲಿ ಮತಗಟ್ಟೆ ಸಿಬ್ಬಂದಿಗಳು ಹೊರಡಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಇವಿಎಂ, ವಿವಿ ಪ್ಯಾಟ್‍ಗಳು, ಕಂಟ್ರೋಲಿಂಗ್ ಯುನಿಟ್, ಶಾಯಿ, ಚುನಾವಣೆಗೆ ಅಗತ್ಯವಾದ ಇತರೆ ಸಾಮಗ್ರಿಗಳೊಂದಿಗೆ ಅಧಿಕಾರಿ/ಸಿಬ್ಬಂದಿಗಳು ಸಿದ್ದತೆ ಮಾಡಿಕೊಂಡು ನಿಯೋಜಿಸಲಾದ ಬಸ್‍ಗಳಲ್ಲಿ ಸಂಬಂಧಿಸಿದ ಮತಗಟ್ಟೆಗಳಿಗೆ ತೆರಳಿದರು.

ಲೋಕಸಭಾಕ್ಷೇತ್ರದಲ್ಲಿ ಒಟ್ಟು 2039 ಮತಗಟ್ಟೆಗಳಿದ್ದು, 862789 ಪುರುಷ, 890061 ಮಹಿಳಾ ಮತ್ತು 35 ತೃತೀಯ ಲಿಂಗಿ ಸೇರಿದಂತೆ ಒಟ್ಟು 1752885 ಮತದಾರರು ಇದ್ದಾರೆ. 87 ದುರ್ಬಲ ಮತಗಟ್ಟೆ, 104 ದುರ್ಬಲ ಪ್ರದೇಶ, 4650 ವಲ್ನರಬಲ್ ಮತದಾರರು, 325 ಕ್ರಿಟಿಕಲ್ ಮತಟ್ಟೆಗಳನ್ನು ಗುರುತಿಸಲಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ವಿಶೇಷವಾಗಿ ವಿಶೇಷಚೇತನರು ಯಾವುದೇ ತಾರತಮ್ಯವಿಲ್ಲದೇ ಸಕ್ರಿಯವಾಗಿ ಭಾಗವಹಿಸುವಂತೆ ಮತ್ತು ಹೆಚ್ಚು ಸುಗಮ ಚುನಾವಣೆಗಳನ್ನಾಗಿ ಮಾಡುವ ಸಲುವಾಗಿ ಹಾಗೂ ಮಹಿಳಾ ಮತದಾರರನ್ನು ಮತಗಟ್ಟೆಗಳ ಸೆಳೆಯಲು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 40 ಸಖಿ ಮತಗಟ್ಟೆ, 08 ವಿಶೇಷಚೇತನ ನಿರ್ವಹಣೆ, 08 ಯುವಜನ ನಿರ್ವಹಣೆಯ ಮತಗಟ್ಟೆಗಳು, 08 ಧ್ಯೇಯ ಆಧಾರಿತ ಮತಗಟ್ಟೆ ಹಾಗೂ 08 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

Teacher Jobs: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Teacher Jobs: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Share.
Exit mobile version