Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸೆ.6ರಂದು ‘ಹಿಂದೂ ಮಹಾಸಭಾ ಗಣಪತಿ’ ವಿಸರ್ಜನೆ, ಈ ಸಂಚಾರ ಮಾರ್ಗ ಬದಲಾವಣೆ
KARNATAKA

ಶಿವಮೊಗ್ಗ: ಸೆ.6ರಂದು ‘ಹಿಂದೂ ಮಹಾಸಭಾ ಗಣಪತಿ’ ವಿಸರ್ಜನೆ, ಈ ಸಂಚಾರ ಮಾರ್ಗ ಬದಲಾವಣೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.06 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್- ನೆಹರು ರಸ್ತೆ- ಗೋಪಿ ಸರ್ಕಲ್- ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್ – ಡಿವಿಎಸ್ ಸರ್ಕಲ್ –ಕಾನ್ವೆಂಟ್ ರಸ್ತೆ – ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ.

* ಬೆಂಗಳೂರು ಭದ್ರಾವತಿ, ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್‌ಗಳು/ಸಿಟಿ ಬಸ್‌ಗಳು ಹಾಗೂ ಕಾರು ವಾಹನಗಳು ಎಂಆರ್‌ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.

* ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.

* ಹೊನ್ನಾಳಿ ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್ ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರದ ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

* ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೋಳ ಸರ್ಕಲ್-ಪೊಲೀಸ್ ಚೌಕಿ-ರಾಜ್ ಕುಮಾರ್ ಸರ್ಕಲ್-ಬೊಮ್ಮನಕಟ್ಟೆ-ಸವಳಂಗ ರಸ್ತೆ ಮುಖಾಂತರ ಹೋಗುವುದು.

* ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಹೋಗುವುದು

* ಶಿಕಾರಿಪುರ ಸೊರಬ ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್ ಲಕ್ಷ್ಮೀ ಟಾಕೀಸ್ ಸರ್ಕಲ್-ಪೊಲೀಸ್ ಚೌಕಿ- ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

* ಕೋಟೆ ರಸ್ತೆ ಮತ್ತು ಓಲ್ಡ್ ಬಾರ್‌ಲೈನ್ ರಸ್ತೆ ಎಲ್ಲಾ ವಾಹನಗಳ ಸಂಚಾರ ನಿಷೇಧ.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

BIG UPDATE: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಮೃತರ ಸಂಖ್ಯೆ 800ಕ್ಕೆ ಏರಿಕೆ | Afghanistan Earthquake

CRIME NEWS: ಆಸ್ತಿ ವಿಚಾರಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಅಣ್ಣನನ್ನೇ ಕೊಂದ ತಮ್ಮ

Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.