ಶಿವಮೊಗ್ಗ : ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಏಪ್ರಿಲ್.21ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.21 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜ್, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತ ತಿಳಿಸಿದೆ.
BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್