ಶಿವಮೊಗ್ಗ: ದಿನಾಂಕ: 20.02.2025 ರ ಗುರುವಾರದ ನಾಳೆ 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸನಗರ ಮಾರ್ಗಕ್ಕೆ 20 ಎಂ.ವಿ.ಎ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ಸಾಗರ ತಾಲ್ಲೂಕು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ದಿನಾಂಕ 20.02.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ.
ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 6:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ.
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ