ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಕೆಲವೆಡೆ ಪವರ್ ಕಟ್ ಆಗಲಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಡಿ.12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.