ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ ಉಪವಿಭಾಗ ಸಂತೇಕಡೂರು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಜ. 16 ರಿಂದ 18 ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
ಹುಲಿ-ಸಿಂಹಧಾಮ 16ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ
ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 16-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ‘ವೃದ್ಧೆ’: ‘ಗ್ಯಾರಂಟಿ’ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೆಂದ ‘HDK’
‘ಹಾನಗಲ್ ಪ್ರಕರಣ’ ದುಡ್ಡು ಕೊಟ್ಟು ಮುಚ್ಚಿಹಾಕಲು ಯತ್ನ: ಮಾಜಿ ಸಿಎಂ ‘ಬೊಮ್ಮಾಯಿ’ ಗಂಭೀರ ಆರೋಪ