ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜ.30 ರಂದು ಉದ್ಯೋಗ ಮೇಳ

ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ತುಮಕೂರ’ನ್ನು 2ನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಾಲ್ಡೀವ್ಸ್ ಅಧ್ಯಕ್ಷ ‘ಮುಯಿಝು’ ಪದಚ್ಯುತಿ ಪಕ್ಕಾ.? : ‘ವಾಗ್ದಂಡನೆ ನಿರ್ಣಯ’ ಮಂಡನೆಗೆ ವಿಪಕ್ಷಗಳ ಸಿದ್ಧತೆ : ವರದಿ

Share.
Exit mobile version