ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗವು ಚಾಲನೆಗೊಳಿಸಲು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಅ.16 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್‌ನಗರ, ಕೆಹೆಚ್‌ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಕಾಮತ್ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಅ.15ರಂದು ತೀರ್ಥಹಳ್ಳಿಯಲ್ಲಿ ಮೆಸ್ಕಾಂನಿಂದ ಜನಸಂಪರ್ಕ ಸಭೆ
ತೀರ್ಥಹಳ್ಳಿ ಮೆಸ್ಕಾಂ ಉಪ ವಿಭಾಗ ಕಛೇರಿಯಲಿ ಅ. 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.
BREAKING: ರಾಯಚೂರಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್