ಶಿವಮೊಗ್ಗ : ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10ರ ನಾಳೆ ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುಚ್ಛಕ್ತಿ ದರ ಪರಿಷ್ಕರಣೆ- ಸಾರ್ವಜನಿಕ ಸಭೆ
ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮ.ವಿ.ಸ.ಕಂಪೆನಿಯು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ‘ಸಾರ್ವಜನಿಕ ವಿಚಾರಣೆ’ಯನ್ನು ದಿನಾಂಕ 12.02.2024ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮೆಸ್ಕಾಂ ಕಾರ್ಪೊರೇಟ್ ಕಛೇರಿ ಸಭಾಂಗಣ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಇಲ್ಲಿನಡೆಸಲಿರುವುದು. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಾಗರದ ಪಡವಗೋಡಿನಲ್ಲಿ ಸಂವಿಧಾನ ಜಾಗೃತಿ ಜಾಥಾ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾ.ಪಂ ಯಲ್ಲಿ ಇಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಗ್ರಾ.ಪಂ ಅಧ್ಯಕ್ಷ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರು ಉಪನ್ಯಾಸ ನೀಡಿದರು. ಸಾಗರ ತಾ.ಪಂ ಇಓ ನಾಗೇಶ್ ಬ್ಯಾಲಾದ್, ಪಂಚಾಯಿತಿ ಸದಸ್ಯರು, ಪಿಡಿಓ, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಜರಿದ್ದರು.
ಭಾರತದಲ್ಲಿ Snapchat ಸರ್ವರ್ ಡೌನ್ : ಕಂಟೆಂಟ್ ‘ಅಪ್‌ಲೋಡ್’ ಸಮಸ್ಯೆ ಎದುರಿಸಿದ ಬಳಕೆದಾರರು