ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಎನ್.ಟಿ.ರಸ್ತೆ ನ್ಯಾಷನಲ್ ಹೈವೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 22 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹರಕೆರೆ, ಹಳೇ ಮಂಡ್ಲಿ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ರಾಮಿನಕೊಪ್ಪ ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಫೆ. 24ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಫೆ.24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈವರೆಗೆ ಕರ್ನಾಟಕದಿಂದ ಮಹಾ ಕುಂಭಮೇಳಕ್ಕೆ ರೈಲಿನಲ್ಲಿ ಹೋಗಿ ಬಂದವರೆಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್
BIG NEWS: NPS ರದ್ದು, OPS ಜಾರಿಗೆ ಸಿಎಂ, ಡಿಸಿಎಂ ಸ್ಪಷ್ಟ ಸಂದೇಶ: ಸಿಎಸ್ ಷಡಕ್ಷರಿ