ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಮೇ.18ರ ನಾಳೆ, ಮೇ.19ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮೇ.18ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 18 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ವ್ಯಾಪ್ತಿಯ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, ಮೇಕನಹಳ್ಳಿ ದಿಬ್ಬ, ಶುಭರಕೇರಿ, ಮಾವಿನಕೇರಿ, ಏಕೆ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೇ.19ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಎಂ.ಆರ್.ಎಸ್. ಶಿವಮೊಗ್ಗದ 110/11 ಕೆವಿ ವಿವಿ ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.
BIG NEWS: ಮುಂದಿನ ವರ್ಷದಿಂದ ‘SSLC ಗ್ರೇಸ್ ಮಾರ್ಕ್ಸ್’ ರದ್ದತಿಗೆ ‘ಸಿಎಂ ಸಿದ್ಧರಾಮಯ್ಯ’ ಆದೇಶ
‘SSLC ಪರೀಕ್ಷೆ-2’ಗೆ ನೋಂದಾಯಿಸಿರುವ ವಿದ್ಯಾರ್ಥಿಗಳೇ ಗಮನಿಸಿ : ಜೂ.05 ರವರೆಗೆ ‘ವಿಶೇಷ ತರಗತಿ’ ಆಯೋಜನೆ