ಶಿವಮೊಗ್ಗ: ಸೆಪ್ಟೆಂಬರ್.4ರ ನಾಳೆ, ಸೆಪ್ಟೆಂಬರ್.5ರ ನಾಡಿದ್ದು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ತುರ್ತು ವಿದ್ಯುತ್ ನಿರ್ವಹಮಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ದಿನಾಂಕ 04-09-2024 ಮತ್ತು 05-09-2024ರಂದು ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.
ಸೆ. 04: ವಿದ್ಯುತ್ ವ್ಯತ್ಯಯ
ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯಲ್ಲಿನ ಫೀಡರ್-3ರ 11 ಕೆ.ವಿ. ಮಾರ್ಗಕ್ಕೆ ತಗುಲುವ ಮರಗಳ ಕಡಿತಲೆ ಕಾಮಗಾರಿ ಇರುವುದರಿಂದ ಸೆ. 04 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಚಿಕ್ಕಲ್, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ ನಗರ, ಸುಬ್ಬಯ್ಯ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ.
ಸೆ. 05: ವಿದ್ಯುತ್ ವ್ಯತ್ಯಯ
ಶಿವಮೊಗ್ಗದ ಎಂ.ಆರ್.ಎಸ್. 220 ಕೆವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೇಂದ್ರದ ಮಾರ್ಗಗಳಲ್ಲಿ ಸೆ. 05 ರಂದು ಬೆಳಗ್ಗೆ 09.30 ರಿಂದ ಸಂಜೆ 5.00ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ. ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ ಕರೆಂಟ್ ಇರೋದಿಲ್ಲ.
ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮುಡಾ ಹಗರಣ: ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡ ‘ರಾಜ್ಯ ಸರ್ಕಾರ’
BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’
BIG NEWS : ಏನ್ರಿ ಮೀಡಿಯಾ?…ಎಂದಿದ್ದ ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ!