ಶಿವಮೊಗ್ಗ: ನಗರದಲ್ಲಿ ಮೆಸ್ಕಾಂ ( MESCOM ) ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 21ರ ನಾಳೆ, ಸೆಪ್ಟೆಂಬರ್.22ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.
ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ನಾಡಿದ್ದು ಈ ಪ್ರದೇಶಗಳಲ್ಲಿ ಪವರ್ ಕಟ್
ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಲ್ಲೂರು, ಕೋಣಿಹೂಸೂರು, ಹೊರಬೈಲು, ಹಾರಳ್ಳಿ ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಸೆ. 22 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!