ಶಿವಮೊಗ್ಗ : ಜ.28 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಳೆಬೊಮ್ಮನಕಟ್ಟೆ, ಮಹಾರಾಣಿ ಶಾಲೆ ಹತ್ತಿರ, ಪಾರ್ವತಮ್ಮ ಲೇಔಟ್, ದೇವಂಗೆ 2 ನೇ ಹಂತ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ 28.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 5.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
ಕುಕ್ಕುಟ-ಪಶು ಆಹಾರ ತಯಾರಿಕಾ ಘಟಕ-ಮಾರಾಟ ಕೇಂದ್ರಗಳು ಪರವಾನಗಿ ಪಡೆಯುವುದು ಕಡ್ಡಾಯ
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಹಾಗೂ ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ/ಪಶು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ.
ಈಗಾಗಲೆ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಸರ್ಕಾರದ ಮೇಲ್ಕಾಣಿಸಿದ ಆಜ್ಞೆಯ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಮತ್ತು ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು 2025 ರ ಜನವರಿ 01 ರಿಂದ ಪಡೆಯಬೇಕಾಗಿರುತ್ತದೆ.
ಪ್ರಸ್ತುತ ವರ್ಷ 2025ನೇ ಸಾಲಿಗೆ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರು ನೂತನ ಪರವಾನಗಿ ಪಡೆಯಲು ಮತ್ತು ನವೀಕರಿಸಲು ಸೇವಾ ಸಿಂಧು ಪೋರ್ಟಲ್ sevasindhusevices.karnataka.gov.in ಮೂಲಕ ಆನ್ಲೈನ್ನಲ್ಲಿ ಸೂಕ್ತ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಪರವಾನಗಿ ಪಡೆಯಲು ಕೋರಲಾಗಿದೆ.
ಪರವಾನಗಿ ಪಡೆಯದೇ ಇದ್ದಲ್ಲಿ, ಅಂತಹ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ, (ಉತ್ಪಾದನೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಕಂಡಿಕೆ 8, 9(1) ಹಾಗೂ 1!(1)(ಸಿ) ಪ್ರಕಾರ ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುಪಾಲನಾ ಇಲಾಖೆಯ ಸಂಸ್ಥೆಗಳನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪಶು ಆಸ್ಪತ್ರೆ, ಪಾಲಿಕ್ಲಿನಿಕ್ನ ಪರವಾನಗಿ ಪ್ರಾಧಿಕಾರ ಮತ್ತು ಉಪನಿರ್ದೇಶಕರು ತಿಳಿಸಿದ್ದಾರೆ.
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!