Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಜ.31ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಜ.31ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0930/01/2025 4:23 PM

ಶಿವಮೊಗ್ಗ : ನಗರದ ಅಶೋಕ ರಸ್ತೆ ಮತ್ತು ಶಿವಾಜಿ ರಸ್ತೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಶೋಕರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜ.31 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಕುಷ್ಠರೋಗ ಅಂಟು ರೋಗವಲ್ಲ-ತಾರತಮ್ಯ ಬೇಡ-ಎಚ್ಚರಿಕೆ ಅಗತ್ಯ : DHO ಡಾ.ಕೆ.ಎಸ್.ನಟರಾಜ್

ಶಿವಮೊಗ್ಗ : ಕುಷ್ಠರೋಗ ಅಂಟು ರೋಗವಲ್ಲ. ಈ ರೋಗದ ಬಗ್ಗೆ ತಾರತಮ್ಯ, ಬೇಧ-ಭಾವ ಬೇಡ. ಆದರೆ ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇನ್ನೊಬ್ಬರಿಗೆ ಹರಡಬುದಾದ್ದರಿಂದ ಎಚ್ಚರಿಕೆಯಿಂದ ಇರಬೇಕು ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಶಿವಮೊಗ್ಗ, ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇವರುಗಳ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಹಸಿರು ನಿಶಾನೆಯ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 53 ಕುಷ್ಠರೋಗ ಪ್ರಕರಣಗಳು ಇವೆ. ಇದಲ್ಲದೇ ಏಪ್ರಿಲ್ ನಿಂದ ಇಲ್ಲಿಯವರೆಗೂ 32 ಪ್ರಕರಣಗಳನ್ನು ಪತ್ತೆ ಹಚ್ಚಿದ್ದೇವೆ. ಅದರಲ್ಲಿ ಶಿಕಾರಿಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.

ನಮ್ಮ ದೇಶ ತುಂಬು ಕುಟುಂಬ ಹೊಂದಿರುವ ದೇಶವಾಗಿದೆ. ಇದರಿಂದ ಕುಷ್ಠರೋಗ ಹರಡುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ನಾವು ಕೆಮ್ಮುವಾಗ, ಸೀನುವಾಗ ಎಚ್ಚರಿಕೆ ವಹಿಸಬೇಕು. ಇದಲ್ಲದೇ ದೇಹದಲ್ಲಿ ಬಿಳಿ ಮಚ್ಚೆಗಳು ಕಂಡುಬAದಲ್ಲಿ ನಿರ್ಲಕ್ಷ್ಯತನ ಮಾಡದೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸಲಹೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಶಿಕಾರಿಪುರ ಅಲ್ಲದೆ ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ಕುಷ್ಠರೋಗ ಪ್ರಕರಣಗಳು ಕಂಡುಬAದಿವೆ. ಆದರೆ ಪ್ರಮಾಣ ಕಡಿಮೆ ಇದೆ. ಜಿಲ್ಲೆಯ ಯಾವ ತಾಲ್ಲೂಕು ಕುಷ್ಠರೋಗದಿಂದ ಹೊರತಾಗಿಲ್ಲ. ಇದನ್ನು ತೊಡೆದು ಹಾಕಲು ಆರೋಗ್ಯ ಇಲಾಖೆ ಪಣತೊಟ್ಟಿದ್ದು, ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದೆ ಎಂದರು.

ಮೆಗ್ಗನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಟಿ.ಡಿ.ತಿಮ್ಮಪ್ಪ ಮಾತನಾಡಿ, ನಾವು ಸಣ್ಣ ಮಕ್ಕಳಿದ್ದಾಗ ನಗರದ ಬಸ್‌ಸ್ಟಾö್ಯಂಡ್, ದೇವಸ್ಥಾನ ಒಳಗೊಂಡAತೆ ಅನೇಕ ಕಡೆ ಕುಷ್ಠರೋಗಿಗಳನ್ನು ಕಾಣುತ್ತಿದ್ದೆವು. ಜನರು ಅವರನ್ನು ಮುಟ್ಟಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಈ ಖಾಯಿಲೆಯಿಂದ ಅವರು ವೈವಾಹಿಕ ಜೀವನದಿಂದಲೇ ದೂರ ಉಳಿದಿದ್ದರು. ಇಡೀ ಸಮಾಜವೇ ಈ ರೋಗವನ್ನು ಅನಿಷ್ಠವೆಂಬAತೆ ಕಾಣುತ್ತಿದ್ದರು ಎಂದು ತಮ್ಮ ಬಾಲ್ಯದ ನೆನಪನ್ನು ಹಂಚಿಕೊAಡರು.

ಏಸುಕ್ರಿಸ್ತ, ಭಗವಾನ್ ಬುದ್ದ, ಮಹಾತ್ಮ ಗಾಂಧಿ, ಮದರ್ ತೆರೇಸಾ ಇವರೆಲ್ಲಾ ಕುಷ್ಠರೋಗವನ್ನು ಅನಿಷ್ಠವೆಂದು ಕಾಣದೆ ಸೇವೆಯನ್ನು ಮಾಡಿದವರು. ಕುಷ್ಠರೋಗವು ಸ್ವರ್ಶದಿಂದ ಬರುವುದಿಲ್ಲ ಎಂದು ಅರಿತಿದ್ದ ಈ ಮಹಾನೀಯರು ತಮ್ಮ ಬದುಕಿನುದ್ದಕ್ಕೂ ಈ ರೋಗಿಗಳ ಶುಶ್ರೂಷೆ ಮಾಡುತ್ತಾ ಜೀವನ ನಡೆಸಿದರು. ಕುಷ್ಠರೋಗವನ್ನು ಹೋಗಲಾಡಿಸಬೇಕೆಂದು ಶ್ರಮಿಸುತ್ತಿರುವ ನಾವೆಲ್ಲರು ಇವರ ಆದರ್ಶವನ್ನು ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ಕೂಡ ಬೇಕು ಎಂದರು.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶ್ರೀಧರ್ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಗಾಂಧೀಜಿಯವರ ಆಂದೋಲನ ನೆನೆಪಿಸುತ್ತಿದೆ. ಇತ್ತೀಚಿಗೆ ಕುಷ್ಠರೋಗದ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆ ಮೂಡಿದೆ. ಈ ರೋಗ ಪಾಪ, ಪುಣ್ಯದ ಪಿಡುಗು ಎಂದು ಭಾವಿಸಲಾಗುತ್ತಿದೆ. ಅಂತಹ ತಪ್ಪು ಕಲ್ಪನೆಯನ್ನು ಹೊಗಲಾಡಿಸೋಣ. ಅದಕ್ಕೆ ಇಂತಹ ಅಭಿಯಾನಗಳು ಮುಖ್ಯವಾಗಿದೆ ಎಂದರು.

ಕುಷ್ಠರೋಗ ಸಮಾಜ ಮತ್ತು ಆರ್ಥಿಕತೆಯ ಮೇಲೆ ತುಂಬಾ ಸಮಸ್ಯೆ ಉಂಟು ಮಾಡುತ್ತಿದೆ. ಈ ರೋಗ ಇದೆ ಎಂದು ಹೇಳಲು ಕೂಡ ಮುಜುಗರ ಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಇಂತಹ ಪಿಡುಗನ್ನು ತೊಡೆದು ಹಾಕಲು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಾವೆಲ್ಲಾ ಕೆಲಸ ಮಾಡಬೇಕು. ಹಳ್ಳಿ ಹಳ್ಳಿಗಳಿಗು ಹೋಗಿ ಇದರ ಬಗ್ಗೆ ಅರಿವು ಮೂಡಸಬೇಕು. ಭಾರತೀಯ ವೈದ್ಯಕೀಯ ಸಂಘದವರು ಈ ಪಿಡುಗನ್ನು ಹೋಗಲಾಡಿಸಲು ಸದಾ ಆರೋಗ್ಯ ಇಲಾಖೆಯ ಜೊತೆ ಕೈ ಜೋಡಿಸುತ್ತದೆ ಎಂದರು.

ಕಾರ್ಯಕ್ರದಲ್ಲಿ ಜಿಲ್ಲಾ ಕುಷ್ಠರೋಗ ನಿವಾರಣಾ ಕಾರ್ಯಕ್ರಮಧಿಕಾರಿ ಡಾ.ಎಸ್.ಕೆ. ಕಿರಣ್ ಮಾತನಾಡಿ, ಚರ್ಮದ ಮೇಲೆ ತಿಳಿಬಿಳಿ ಅಥವಾ ಕೆಂಪು ಇಲ್ಲವೇ ತಾಮ್ರ ವರ್ಣ ಸ್ಪರ್ಷಜ್ಞಾನವಿಲ್ಲದ ಮಚ್ಚೆಗಳು, ಚರ್ಮದ ಮೇಲೆ ಬೆಳವಣಿಗೆಗಳು(ಗಂಟು), ನೋವು ರಹಿತ ಹುಣ್ಣುಗಳು, ಹುಬ್ಬುಗಳು ಅಥವಾ ಕಣ್ರೆಪ್ಪೆಗಳ ನಷ್ಟ ಇವು ಕುಷ್ಠರೋಗದ ಲಕ್ಷಣಗಳಾಗಿವೆ. ಈ ರೋಗವನ್ನು ತಡೆಗಟ್ಟಲು ಮಚ್ಚೆಗಳನ್ನು ಗುಪ್ತವಾಗಿರಿಸದೇ ವೈದ್ಯರಿಗೆ ತೋರಿಸಬೇಕು. ಪ್ರಾರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಹರಡುವಿಕೆ ತಡೆಯಬಹುದು ಹಾಗೂ ಇದರಿಂದಾಗುವ ಅಂಗವೈಕಲ್ಯ ತಡೆಯಬಹುದು. ಕುಷ್ಠರೋಗದಿಂದ ಬಳಲುವವರಿಗೆ ಆರೋಗ್ಯ ಇಲಾಖೆಯಿಂದ ಶಸ್ತçಚಿಕಿತ್ಸೆ, ಉಚಿತ ಎಂಸಿಆರ್ ಚಪ್ಪಲಿ, ಸಹಾಯಕ ಔಷಧಿಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಇವರು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ “ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ – 2025” ಕಾರ್ಯಕ್ರಮದ ಪೋಸ್ಟರ್ ಹಾಗೂ ಕುಷ್ಠರೋಗ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ, ಮಾತನಾಡಿ ಈ ಪಾಕ್ಷಿಕÀದಲ್ಲಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಕುಷ್ಠರೋಗಿಗಳನ್ನು ಅತೀ ಶ್ರೀರ್ಘದಲ್ಲಿ ಗುರುತಿಸಿ ಚಿಕಿತ್ಸೆಗೆ ಒಳಪಡಿಸುವುದು ಮತ್ತು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳನ್ನು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕರೆ ನೀಡಿದರು.

ಇದೇ ವೇಳೆ ಕುಷ್ಟರೊಗ ಜಾಗೃತಿ ಕುರಿತು ಸೈಕಲ್ ಜಾಥಾ ಕೈಗೊಳ್ಳಲಾಯಿತು. ಹಾಗೂ ಕುಷ್ಟರೋಗ ಜಾಗೃತಿ ಆಂದೋಲನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ಚರ್ಮರೋಗ ತಜ್ಞರಾದ ಡಾ.ದಾದಾಪೀರ್ ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಹಾಜದರಿದ್ದರು.

ಡಿಜಿಟಲ್ ಪಾವತಿ ವರ್ಷದಿಂದ ವರ್ಷಕ್ಕೆ ಎರಡಂಕಿ ಏರಿಕೆ: RBI | Digital Payments

ಈಗ ‘ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿಸಲ್ಲಿಕೆ ಮತ್ತಷ್ಟು ಸರಳ: ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ಸಲ್ಲಿಸಿ | Karnataka Chief Minister Relief Fund

Share. Facebook Twitter LinkedIn WhatsApp Email

Related Posts

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

07/07/2025 8:29 PM1 Min Read

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM2 Mins Read

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM1 Min Read
Recent News

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM

‘ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್’ನ್ನ ಹೊಸ ರೂಪದಲ್ಲಿ ವ್ಯಾಖ್ಯಾನಿಸಲಾಗುವುದು’ : ಬ್ರೆಜಿಲ್ ಸಭೆಯಲ್ಲಿ ಪ್ರಧಾನಿ ಮೋದಿ

07/07/2025 8:56 PM
State News
KARNATAKA

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

By kannadanewsnow0907/07/2025 8:29 PM KARNATAKA 1 Min Read

ಕೋಲಾರ: ವಿವಾಹಿತೆಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡಿದ್ದಲ್ಲದೇ, ಗರ್ಭಿಣಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದಂತ ಪ್ರಿಯಕರನ ಮನೆ ಮುಂದೆ ಮಹಿಳೆ…

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.