ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಜೂನ್ 20 ರವರೆಗೆ ಕಾಲಾವಕಾಶ ನೀಡಲಾಗಿದೆ.
ಸಾಗರ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 3 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 62 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಪಟ್ಟಿ ಎಲ್ಲೆಲ್ಲಿ ಲಭ್ಯ?
ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ವಿವರಗಳಿರುವ ಪಟ್ಟಿಯನ್ನು ಸಾಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (CDPO) ಕಚೇರಿ ಹಾಗೂ ಆಯಾ ವ್ಯಾಪ್ತಿಯ ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಜೂನ್ 20ರೊಳಗೆ ಆಕ್ಷೇಪಣೆ ಸಲ್ಲಿಸಿ
ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಕಂಡುಬಂದಲ್ಲಿ ಅಥವಾ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಜೂನ್ 20ರ ಒಳಗಾಗಿ ಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಈ ನೇಮಕಾತಿ ಮತ್ತು ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚುವರಿ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಅಭ್ಯರ್ಥಿಗಳು ಕೆಳಗಿನ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ:
ಕಚೇರಿ ವಿಳಾಸ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಆರ್ಯ ಈಡಿಗರ ಸಮಾಜ ಕಟ್ಟಡ, ಸೊರಬ ರಸ್ತೆ, ಸಾಗರ. ದೂರವಾಣಿ ಸಂಖ್ಯೆ: 08183-226804
SHOCKING: ರಾಜ್ಯದಲ್ಲಿ ತೀವ್ರ ಎದೆ ಉರಿಯಿಂದ 4 ವರ್ಷದ ಬಾಲಕ ಸಾವು; ಹೃದಯಾಘಾತದ ಶಂಕೆ
ಧರ್ಮಸ್ಥಳ ಬುರುಡೆ ಕೇಸ್: ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ- ನಟ ಪ್ರಕಾಶ್ ರಾಜ್








