ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಎರಡನೇ ಮಹಾಲಯ ಜಾತ್ರಾ ಮಹೋತ್ಸವ ಶುಕ್ರವಾರ ವಿಜ್ರಂಭಣೆಯಿಂದ ಜರುಗಿತು.
ದೇವಸ್ಥಾನದ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷರಾದ ಕಲಗೋಡು ರತ್ನಾಕರ್ ಅವರು ದೇವಿಯ ದರ್ಶನ ಪಡೆದು ಮಹಾಲಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ (16-09-2025) ಮತ್ತು ಶುಕ್ರವಾರ(19-09-2025) ದಂದು ಹಾಗೂ ನವರಾತ್ರಿಯಲ್ಲಿ ಒಂಬತ್ತು ದಿನ ದೇವಿಗೆ ವಿಶೇಷ ಅಲಂಕಾರದ ಜೊತೆಗೆ ವಿಶೇಷ ಪೂಜೆ ವಿಜೃಂಭಣೆಯಿಂದ ಜರುಗಲಿದೆ.
ರಿಪ್ಪನ್ ಪೇಟೆಯ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನವನ್ನು ಪಡೆಯಬೇಕು ಎಂದು ಜಾತ್ರಾ ಮಹೋತ್ಸವಕ್ಕೆ ಸಮಸ್ತ ಭಕ್ತಾದಿಗಳಿಗೆ ಜಾತ್ರಾ ಸಮಿತಿಯ ಪರವಾಗಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ
ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ